ಬದಿಯಡ್ಕ: ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿಯವರ ಆಡಳಿತ ಸೇವೆಯ 25 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ, ಬಿಜೆಪಿ ರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಬದಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರಡಾಲ ಉನ್ನತಿಗೆ ಬಿಜೆಪಿ ನಾಯಕರು ಭೇಟಿ ನೀಡಿದರು.
ಉನ್ನತಿಯಲ್ಲಿ ನಡೆಯುತ್ತಿರುವ ಸಾಂಪ್ರದಾಯಿಕ ಸ್ವಯಂ ಉದ್ಯೋಗ ಚಟುವಟಿಕೆಗಳ ಭಾಗವಾಗಿ ಚಾಪೆ, ಬುಟ್ಟಿ ಕೂಡು, ತಿಡುಪ್ಪು ಮುಂತಾದ ಸ್ಥಳೀಯ ಉತ್ಪನ್ನಗಳನ್ನು ತಯಾರಿಸುವ ಕಾರ್ಮಿಕರನ್ನು ನೇರವಾಗಿ ಭೇಟಿ ಮಾಡಿ, ಅವರ ಕೆಲಸ ಹಾಗೂ ಜೀವನೋಪಾಯದ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಯಿತು.
ಉನ್ನತಿಯ ಜನರ ಪ್ರಮುಖ ಜೀವನೋಪಾಯವಾಗಿರುವ ಸ್ಥಳೀಯ ಉತ್ಪನ್ನಗಳು ಹಾಗೂ ಸಾಂಪ್ರದಾಯಿಕ ಉದ್ಯೋಗಗಳನ್ನು ಪ್ರೋತ್ಸಾಹಿಸುವ ‘ವೋಕಲ್ ಫಾರ್ ಲೋಕಲ್’ ಪರಿಕಲ್ಪನೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಭೇಟಿ ನಡೆಯಿತು.
ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಉನ್ನತಿಯ ವಿವಿಧ ಕುಟುಂಬಗಳನ್ನೂ ನೇರವಾಗಿ ಭೇಟಿ ಮಾಡಿ, ಅವರ ಅನುಭವಗಳು, ಸಮಸ್ಯೆಗಳು ಹಾಗೂ ಅಗತ್ಯಗಳನ್ನು ಆಲಿಸಲಾಯಿತು.
ಈ ಸಂದರ್ಭದಲ್ಲಿ ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಡಿ. ಶಂಕರ, ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ ಮಜಲ್, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಅಶ್ವಿನಿ ಕೆ.ಎಂ., ಜಿಲ್ಲಾ ಸೆಲ್ ಕೋ-ಆರ್ಡಿನೇಟರ್ ಸುಕುಮಾರ್ ಕುದ್ರೆಪ್ಪಾಡಿ, ರಾಜ್ಯ ಕೌನ್ಸಿಲ್ ಸದಸ್ಯ ಹರೀಶ್ ನಾರಂಬಾಡಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ಆರ್. ನಾಯಕ್, ಬದಿಯಡ್ಕ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಧರ ಬೆಳ್ಳೂರು ವೆಲ್ಫೇರ್ ಸ್ಟ್ಯಾಂಡಿಂಗ್ ಕಮಿಟಿ ಆಧ್ಯಕ್ಷೆ ರಜನಿ ಸಂದೀಪ್ ಹೆಲ್ತ್ & ಎಜುಕೇಶನ್ ಸ್ಟ್ಯಾಂಡಿಂಗ್ ಕಮಿಟಿ ಆಧ್ಯಕ್ಷ ಅವಿನಾಶ್ ರೈ ಜನಪ್ರತಿನಿಧಿಗಳಾದ ಮಧುಸೂದನ. ಉಷ ಪಳ್ಳತಡ್ಕ ಬಿಜೆಪಿ ಬದಿಯಡ್ಕ ಪಂಚಾಯತ್ ಕಾರ್ಯದರ್ಶಿಗಳಾದ ಶರತ್ ಶೆಟ್ಟಿ ನವೀನಾಕ್ಷ ಭಾಗವಹಿಸಿದರು.


